Showing posts with label ದೆಹಲಿಯಲ್ಲೊಬ್ಬ ಪಾಗಲ್ ಪ್ರೇಮಿ. Show all posts
Showing posts with label ದೆಹಲಿಯಲ್ಲೊಬ್ಬ ಪಾಗಲ್ ಪ್ರೇಮಿ. Show all posts

Monday, May 29, 2023

20 ಬಾರಿ ಚಾಕುವಿನಿಂದ ಇರಿದು 16 ವರ್ಷದ ಬಾಲಕಿಯನ್ನು ಹತ್ಯೆಗೈದ ಪಾಗಲ್ ಪ್ರೇಮಿ :- ದೆಹಲಿಯಲ್ಲಿ ಪೈಶಾಚಿಕ ಕೃತ್ಯ ..

ರಾಷ್ಟ್ರ ರಾಜಧಾನಿಯಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದೆ. 16 ವರ್ಷದ ಅಪ್ರಾಪ್ತಗೆ 20 ಬಾರಿ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ.

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದೆ. 16 ವರ್ಷದ ಅಪ್ರಾಪ್ತಗೆ 20 ಬಾರಿ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ನವದೆಹಲಿಯ ಶಹಾಬಾದ್ ಡೈರಿ ಪ್ರದೇಶದಲ್ಲಿ ಭಾನುವಾರ ಆಕೆಯ ಬಾಯ್ ಫ್ರೆಂಡ್ ನಿಂದಲೇ ಈ ಘಟನೆ ನಡೆದಿದ್ದು, ಆರೋಪಿ ಸಾಹಿಲ್ ನನ್ನು ಉತ್ತರ ಪ್ರದೇಶದ ಬುಲಂದ್‌ಶಹರ್ ಬಳಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ಸಾಹಿಲ್ ಮತ್ತು ಮೃತ ಅಪ್ರಾಪ್ತೆ ನಡುವೆ ಸಂಬಂಧವಿತ್ತು ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ನಿನ್ನೆ ದಿನ ಇಬ್ಬರಿಗೂ ಜಗಳವಾಗಿದೆ. ನಂತರ ಆಕೆ ಬೀದಿಯಲ್ಲಿ ಹೋಗುತ್ತಿದ್ದಾಗ ಎದುರಾದ ಸಾಯಿಲ್ 20 ಬಾರಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ ಎಂದು ಉಪ ಪೊಲೀಸ್ ಆಯುಕ್ತ ರವಿಕುಮಾರ್ ಸಿಂಗ್ ತಿಳಿಸಿದ್ದಾರೆ. 

ತಲೆ ಮರೆಸಿಕೊಂಡಿದ್ದ ಆರೋಪಿಯ ಬಂಧನಕ್ಕಾಗಿ ಆರು ತಂಡಗಳನ್ನು ರಚಿಸಲಾಗಿತ್ತು. ಉತ್ತರ ಪ್ರದೇಶದ ಬುಲಂದ್‌ಶಹರ್ ಬಳಿ ಇಂದು ಪೊಲೀಸರ ಕೈಗೆ ಆರೋಪಿ ಸಿಕ್ಕಿಬಿದ್ದಿದ್ದಾನೆ. ಮೃತನ ತಂದೆ ನೀಡಿದ ದೂರಿನ ಮೇರೆಗೆ ಶಹಬಾದ್ ಡೈರಿ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 302 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗೆ ಕಠಿಣ ಶಿಕ್ಷೆ ನೀಡುವ ನಿಟ್ಟಿನಲ್ಲಿ ಸಾಧ್ಯವಿರುವ ಎಲ್ಲ ಸಾಕ್ಷ್ಯಗಳನ್ನು ಸಂಗ್ರಹಿಸುತ್ತೇವೆ ಎಂದು ದೆಹಲಿ ಪೊಲೀಸ್ ಅಧಿಕಾರಿ ದೇವೇಂದ್ರ ಪಾಠಕ್ ಹೇಳಿದ್ದಾರೆ.  ಆಕೆಯ ತಲೆಯನ್ನು ತುಂಡುಗಳಾಗಿ ಕತ್ತರಿಸಲಾಗಿದ್ದು, ಆರೋಪಿಗೆ ಕಠಿಣ ಶಿಕ್ಷೆಯಾಗಬೇಕೆಂದು  ಅಪ್ರಾಪ್ತ ಬಾಲಕಿಯ ತಂದೆ ಒತ್ತಾಯಿಸಿದ್ದಾರೆ.